ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ದೆಹಲಿ ಸುತ್ತಮುತ್ತಲ ರಾಜ್ಯಗಳಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ರಾಕೆಟ್ ಬಾಂಬ್ ಹಾಗೂ ಸೆಲ್‌ಗಳನ್ನು ಸಿಡಿಸುವ ಅಸ್ತ್ರ ಬಳಸಲಾಗಿದೆ. ಆದರೂ ನಮ್ಮ ರೈತರ ಚಳುವಳಿ ನಿಲ್ಲಲಿಲ್ಲ. ರೈತ ಚಳುವಳಿಗಳನ್ನು ಲಘುವಾಗಿ ಕಾಣುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ರೈತರು ವ್ಯವಸಾಯ ನಿಲ್ಲಿಸಿದರೆ ದೇಶದಲ್ಲಿ ಹಸಿವಿಗಾಗಿ ಕ್ರಾಂತಿ ಶುರುವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಯಾವುದೇ ಲಾಭವಿಲ್ಲ. ರೈತರು ಕೇಳುತ್ತಿರುವ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.
ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರಿಗೆ ನೀಡುತ್ತಿದ್ದ 4 ಸಾವಿರ ಕಿಸಾನ್ ಸಮ್ಮಾನ್ ಹಣವನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಕ ರೈತರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಇನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದರು.
ಇನ್ನೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡದೇ ವಂಚನೆ ಮಾಡುತ್ತಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಮುಂದೆ ಇದೇ.18ರಂದು ಕಬ್ಬು ಬೆಳೆಗಾರರ ರೈತರ ಜಾಗೃತ ಸಮಾವೇಶ ನಡೆಸಿ ರೈತರನ್ನು ಜಾಗೃತಿ ಮೂಡಿಸಲಾಗುವುದು. ರೈತರ ಬಾಕಿ ಟನ್‌ಗೆ 150 ರೂ ಕೊಟ್ಟು ಕಾರ್ಖಾನೆ ಆರಂಭಿಸಿ ಎಂದು ಎಚ್ಚರಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…