ಮೈಸೂರು

ಜು.8ರಂದು ಸಂಸದರಿಗೆ ದೆಹಲಿ ರೈತ ಚಳುವಳಿಯ ಜ್ಞಾಪನ ಪತ್ರ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯ

ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ದೆಹಲಿ ಸುತ್ತಮುತ್ತಲ ರಾಜ್ಯಗಳಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ರಾಕೆಟ್‌ ಬಾಂಬ್‌ ಹಾಗೂ ಸೆಲ್‌ಗಳನ್ನು ಸಿಡಿಸುವ ಅಸ್ತ್ರ ಬಳಸಲಾಗಿದೆ. ಆದರೂ ನಮ್ಮ ರೈತರ ಚಳುವಳಿ ನಿಲ್ಲಲಿಲ್ಲ. ರೈತ ಚಳುವಳಿಗಳನ್ನು ಲಘುವಾಗಿ ಕಾಣುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ರೈತರು ವ್ಯವಸಾಯ ನಿಲ್ಲಿಸಿದರೆ ದೇಶದಲ್ಲಿ ಹಸಿವಿಗಾಗಿ ಕ್ರಾಂತಿ ಶುರುವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಯಾವುದೇ ಲಾಭವಿಲ್ಲ. ರೈತರು ಕೇಳುತ್ತಿರುವ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.

ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರಿಗೆ ನೀಡುತ್ತಿದ್ದ 4 ಸಾವಿರ ಕಿಸಾನ್‌ ಸಮ್ಮಾನ್‌ ಹಣವನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಕ ರೈತರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಇನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಇನ್ನೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡದೇ ವಂಚನೆ ಮಾಡುತ್ತಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಮುಂದೆ ಇದೇ.18ರಂದು ಕಬ್ಬು ಬೆಳೆಗಾರರ ರೈತರ ಜಾಗೃತ ಸಮಾವೇಶ ನಡೆಸಿ ರೈತರನ್ನು ಜಾಗೃತಿ ಮೂಡಿಸಲಾಗುವುದು. ರೈತರ ಬಾಕಿ ಟನ್‌ಗೆ 150 ರೂ ಕೊಟ್ಟು ಕಾರ್ಖಾನೆ ಆರಂಭಿಸಿ ಎಂದು ಎಚ್ಚರಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago