ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ.
ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಮೇ ಅಥವಾ ಜೂನ್ ತಿಂಗಳಲ್ಲಿ ವಿಮಾನ ಯಾನ ಸೇವೆ ಆರಂಭಿಸುವ ತೀರ್ಮಾನಕ್ಕೆ ಬರಲಾಯಿತು.
ಏರ್ ಕೇರಳ ಅಧ್ಯಕ್ಷ ಅಫಿ ಅಹಮ್ಮದ್ ಮಾತನಾಡಿ, ಮೇ, ಜೂನ್ ತಿಂಗಳಲ್ಲಿ ಮೂರು ಹಾಗೂ ನಂತರದ ಹಂತದಲ್ಲಿ ಮೂರು ಏರ್ ಕ್ರಾ-ಗಳನ್ನು ಖರೀದಿಸಲಾಗುವುದು. ಕೇರಳದ ಯಾವ ನಿಲ್ದಾಣದದಿಂದ ಮೈಸೂರಿಗೆ ವಿಮಾನಯಾನ ಸೇವೆ ಆರಂಭಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.
ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಏರ್ ಕೇರಳ ಸಂಸ್ಥೆಯ ವಿಮಾನಯಾನ ಸೇವೆಯ ಆರಂಭಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ವಿಮಾನ ನಿಲ್ದಾಣದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ದೇಶದ ಎಲ್ಲ ಪ್ರದೇಶಗಳಿಗೆ ವಾಯು ಯಾನ ಸಂಪರ್ಕವನ್ನು ಸುಧಾರಿಸುವ ದೃಷ್ಟಿಕೋನವನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಗರಿಕ ವಿಮಾನ ಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಧನ್ಯವಾದ ಹೇಳಿದರು.
ಮೈಸೂರು ಪ್ರವಾಸಿ ತಾಣವಾಗಿರುವುದರಿಂದ ವರ್ಷ ಪೂರ್ತಿ ಇಲ್ಲಿಗೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಮೈಸೂರಿನ ದೇವಾಲಯಗಳು ಹಾಗೂ ಇನ್ನಿತರ ಧಾರ್ಮಿಕ ಕೇಂದ್ರಗಳ ವೀಕ್ಷಣೆಗೆ ಆಗಮಿಸುತ್ತಾರೆ. ಇಲ್ಲಿನ ಸಾಂಸ್ಕೃತಿಕ ಪರಂಪರೆ, ಇತಿಹಾಸ, ಯೋಗ, ಆರೋಗ್ಯ ಕೇಂದ್ರ, ಅರಮನೆ, ದಸರಾ ಮಹೋತ್ಸವದಂತಹ ಉತ್ಸವಗಳು ನಡೆಯುವುದು, ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳಿವೆ. ಕೈಗಾರಿಕೋದ್ಯಮ, ಆಮದು, ರಫ್ತು ಚಟುವಟಿಕೆಯೂ ನಡೆಯುತ್ತಿದೆ. ಈ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ನೂತನ ಸೇವೆ ಸಹಾಯಕವಾಗಲಿದೆ ಎಂದರು.
ಏರ್ ಕೇರಳ ಉಪಾಧ್ಯಕ್ಷ ಅಯೂಬ್ ಕಲ್ಲಡ, ಸಿಇಒ ಹರೀಶ್ ಕುಟ್ಟಿ, ಗ್ರೌಂಡ್ ಆಪರೇಷ ಮುಖ್ಯಸ್ಥ ಶಾಮನ್ ಪಟ್ಟವಾತುಕಲ, ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಆರ್.ಅನೂಪ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಕೈಗಾರಿಕೆ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ಸ್ಕಾಲ್ ಅಧ್ಯಕ್ಷ ಜಯಕುಮಾರ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರತಿನಿಽಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು…
ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ…
ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್ ಹಾರಾಟ ನಡೆಸಿದ್ದು, ದೇವಾಲಯದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.…
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ.…
ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ…