ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು ನನ್ನ ಬೆಂಬಲವಾಗಿ ನಿಂತುಕೊಳ್ಳಿ ಸಾಕು ಎಂದಿದ್ದಾರೆ.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಅವಕಾಶ ಕೊಡಲ್ಲ. ಜೆಡಿಎಸ್ ಇನ್ಮುಂದೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದೀಗ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ನನಗೆ ಶಕ್ತಿ ತುಂಬಬೇಕು ಎಂದು ಒಕ್ಕಲಿಗೆ ಸಮುದಾಯದ ಮುಖಂಡರನ್ನು ಕೋರಿದರು.
ಮೈಸೂರಿನಲ್ಲಿ ನಮ್ಮ ಸಮುದಾಯದವರಿಗೆ ರಕ್ಷಣೆ ಇಲ್ಲ. ನಾಯಕತ್ವದ ಕೊರತೆಯೂ ಇದೆ. ಈಗ ಕೆ.ವೆಂಕಟೇಶ್, ಕೆ.ಹರೀಶ್ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ಮೈಸೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ಲಕ್ಷ್ಮಣ್ ಸೋತರೆ ನನಗೆ ಹಾಗೂ ಒಕ್ಕಲಿಗೆ ಸಚಿವರಿಗೆ ಬಹಳ ತೊಂದರೆ ಆಗುತ್ತದೆ. ಇದನ್ನ ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ರೈತ ಕುಟುಂಬ ಹಿನ್ನಲೆಯ ಸಾಮಾನ್ಯ ಕಾರ್ಯಕರ್ತನಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. 47 ವರ್ಷ ಬಳಿಕ ನಮ್ಮ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಾನು ಹೆಚ್ಚು ಹೇಳಿಕೊಳ್ಳಲ್ಲ, ಆದರೆ ಸಮಾಜಕ್ಕೆ ಎಲ್ಲೆಲ್ಲಿ ಸಹಾಯ ಮಾಡಬೇಕೋ ಮಾಡಿದ್ದೇನೆ. ಇದೀಗ ಮೈಸೂರು ಕ್ಷೇತ್ರ ಕಳೆದುಕೊಂಡರೆ ಮುಂದೆ ನಮಗೆ ಸಿಗುವುದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.
ಪ್ರತಾಪ ಸಿಂಹ ಹಾಗೂ ಡಿ.ವಿ ಸದಾನಂದಗೌಡ ಕೊಡಬೇಕಾದ ಸಂದೇಶವನ್ನು ಈಗಾಗಲೇ ಕೊಟ್ಟಿದ್ದಾರೆ. ಇದನ್ನು ಸಮಾಜದವರು ಅರಿಯಬೇಕು ಎಂದರು.
ಸಚಿವರಾದ ಕೆ.ವೆಂಕಟೇಶ್, ಎನ್ ಚಲುವರಾಯಸ್ವಾಮಿ, ಶಾಸಕ ಹರೀಶ್
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…