ಮೈಸೂರು

ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ: ದಿನೇಶ್ ಗುಂಡೂರಾವ್

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸೊಳ್ಳೆಗಳ ಮೂಲಕ ಡೆಂಗ್ಯೂ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.

andolana

Recent Posts

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

17 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

25 mins ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

35 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

52 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

1 hour ago