ಮೈಸೂರು

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

1 min ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

13 mins ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

32 mins ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

1 hour ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

2 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

3 hours ago