ಮೈಸೂರು

ಸಿದ್ದರಾಮಯ್ಯಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿ.ಟಿ ದೇವೇಗೌಡ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಟಿ ದೇವೇಗೌಡ, ಇಷ್ಟು ವರ್ಷಗಳಿಂದ ರಾಜಕೀಯದಲ್ಲಿದ್ದರೂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ನನ್ನಷ್ಟು ಗಟ್ಟಿ ಸಿದ್ದರಾಮಯ್ಯ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ರೀತಿ ಅಧಿಕಾರಕ್ಕಾಗಿ ಯಾರ್ ಯಾರ ಮನೆ ಬಾಗಿಲಿಗೂ ಹೋದವನಲ್ಲ ನಾನು ಎಂದು ವ್ಯಂಗ್ಯವಾಡಿದರು.

ತಾಲ್ಲೂಕು ಬೋರ್ಡ್, ಎಪಿಎಂಸಿ, ಡೈರಿಯಲ್ಲಿ ಅಪ್ಪ ಮಕ್ಕಳು ಸೋತವರೆ, ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ. ಸಿದ್ದರಾಮಯ್ಯ ಬರಿ ದ್ವೇಷಕ್ಕೆ ರಾಜಕಾರಣ ಮಾಡಿದ್ರು. ಅಷ್ಟೂ ಇದ್ರೆ ಅವರಿಗಾಗಿ ಸರ್ವಸ್ವ ತ್ಯಾಗ ಮಾಡಿದ ಮರಿಗೌಡನಿಗೆ ಟಿಕೆಟ್ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ, ಕೃಷ್ಣಸಾಗರ್ ಇದ್ರು. ಇವರಿಗೆ ಕೊಟ್ಟಿದ್ರೆ ಗೌರವಯುತವಾಗಿ ಸೋಲುತ್ತಿದ್ದರು ಎಂದು ಹೇಳಿದರು.

ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸುವುದಿಲ್ಲ: ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್ ತಗೋತಾನೆ ನೋಡೊಣ ಬನ್ನಿ. ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ ನಾನು ಸಿದ್ದೇಗೌಡನ‌ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸಲ್ಲ ಎಂದರು.

ಇನ್ನು, ನಾನು ಗೆಲ್ಲಲಿ ಸೋಲಲಿ ನನ್ನ ಜಾಯಿಮಾನದಲ್ಲಿಯೇ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ, ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ, ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೊದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಆಶಿರ್ವಾದದಿಂದ ಗೆಲ್ಲುತ್ತೇನೆ ಎಂದ ಜಿ.ಟಿ ದೇವೇಗೌಡ, ಪ್ರಚಾರದ ವೇಳೆ ಎಲ್ಲಾ ಕಾರ್ಯಕರ್ತರು ನನಗೆ ಅದ್ದೂರಿ ಸ್ವಾಗತ ಕೊಟ್ಟಿದ್ದರು. ಜನರು ಭಾರೀ ಉತ್ಸಾಹದಿಂದ, ಪ್ರೀತಿಯಿಂದ ಜಿ.ಟಿ ದೇವೇಗೌಡರನ್ನು ಗೆಲ್ಲಿಸುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.

andolanait

Recent Posts

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

9 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

52 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

3 hours ago