ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯಾತೀತ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜ ಕ್ಷೇತ್ರದಲ್ಲಿ ನಡೆದ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳು ಜಾತ್ಯತೀತವಾಗಿಲ್ಲ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ(ಸಿದ್ದರಾಮಯ್ಯ) ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.
ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.
ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…