ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.
ಹಿರಿಕ್ಯಾತನಹಳ್ಳಿಯಲ್ಲಿ ನಡೆದ ಶ್ರೀ ಮಲೆ ಮಹದೇಶ್ವರ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಾ.ದಳದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ ಅವರು ಸಹ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕನಿಷ್ಠ ರಸ್ತೆ ಗುಂಡಿ ಮುಚ್ಚಲು ಆಗದ ಸ್ಥಿತಿ ನಿರ್ಮಾಣವಾಗಿದೆ. ದೇವರಾಜ ಅರಸು ಅವರು ಶಾಸಕರಾಗಿದ್ದ ಕ್ಷೇತ್ರದಲ್ಲಿ ಶಾಸಕನಾಗಿ ಆಯ್ಕೆಯಾಗಿರುವುದು ನನ್ನ ಅದೃಷ್ಟ. ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಮತ್ತೊಮ್ಮೆ ದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದರು.
17 ರಂದು ಜನರೊಂದಿಗೆ ಜನತಾದಳ
ಹುಣಸೂರಿನಲ್ಲಿ ಫೆ.17 ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜಿಸಿದ್ದು, ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಂದೆ ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳು ಬರುತ್ತಿದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು. ಆಕಾಂಕ್ಷಿಗಳು ಈಗಿನಿಂದಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…