ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ರಾಜಕೀಯಕ್ಕೆ ಬರಬೇಕೆಂದು ಒಂದು ವರ್ಷದ ಹಿಂದೆಯೇ ಚಿಂತನೆ ನಡೆಸಿದ್ದೆ, ಕಳೆದ 9 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜನರ ಸೇವೆ ಮಾಡಲು ಇಚ್ಛಿಸಿದ್ದು, ಅದಕ್ಕಾಗಿ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯದುವೀರ್ ಹೇಳಿದರು.
ಸಮಾಜವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಮೈಸೂರು ಅರಸರು ಮೀಸಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅದೇ ರೀತಿ ಕೇಂದ್ರ ಸರ್ಕಾರ ಜನರ ಏಳಿಗೆಗೆ ಶ್ರಮಿಸುತ್ತಿದೆ. ಇದರೊಂದಿಗೆ ಪರಂಪರೆಯ ರಕ್ಷಣೆ, ಭಾರತೀಯರ ಮೂಲಕ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಇವೆಲ್ಲವೂ ನಮಗೆ ಸ್ಫೂರ್ತಿ ನೀಡಿದ್ದು, ವಿಕಸಿತ ಭಾರತ ಕಟ್ಟುವ ಕೆಲಸ ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಯದುವೀರ್ ಕರೆ ನೀಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಧ್ಯಕ್ಷೆ ಮಂಜುಳ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್ ಇತರರು ಹಾಜರಿದ್ದರು.
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…