ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬ ಪ್ರಶ್ನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಕೆಟ್ ಊಹಾಪೋಹಗಳಿಗೆ ಸೋಮವಾರ ತಡರಾತ್ರಿ ಫೇಸ್ ಬುಕ್ ಲೈವ್‌ನಲ್ಲಿ ಬಂದು ಕ್ಷೇತ್ರದ ಬಗ್ಗೆ ಹಾಗೂ ತಮ್ಮ ಪ್ರಗತಿ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದರು. ಇವೆಲ್ಲದರ ನಡುವೆ ಇಂದು (ಮಾ.೧೨) ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದರು, ತಮಗೆ ಟಿಕೆಟ್ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಕೈ ತಪ್ಪಿರುವುದು ಇನ್ನು ಖಚಿತವಾಗಿಲ್ಲ. ಸಿಈಸಿ ಸಭೆಯ ತೀರ್ಮಾನದ ಬಗ್ಗೆ ನನಗೆ ಮಾಹಿತಿಯಿಲ್ಲ. ಈವರೆಗೆ ಟಿಕೆಟ್ ಸಿಗದಿರುವ ಬಗ್ಗೆ ಅಧಿಕೃತ ಘೋಷಣೆಯಾಗದಿರುವ ಕಾರಣ ನನಗೆ ಖಚಿತವಾಗಿ ಟಿಕೆಟ್ ಸಿಗುವ ವಿಶ್ವಾಸವಂತೂ ಇದೆ ಎಂದು ಸಂಸದ ಪ್ರತಾಪಸಸ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಸಿಗಲಿ ಬಿಡಲಿ, ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾದ್ದೇನೆ. ಮೈಸೂರು, ಕೊಡಗು ಮಾತ್ರವಲ್ಲ ಕ್ಷೇತ್ರದಾಚೆಗೂ ಜನರು ನನಗೆ ಟಿಕೆಟ್ ಸಿಗುವಂತೆ ಆಗ್ರಹಿಸಿದ್ದಾರೆ. ನನ್ನ ಟಿಕೆಟ್ ವಿಚಾರದ ಸದ್ಯ ಟ್ರೆಂಡಿಂಗ್ ಆಗಿದೆ. ಇಂತಹ ಜನರ ಪ್ರೀತಿ ಗಳಿಸಿದ ನಾನು ನಿಜಕ್ಕೂ ಭಾಗ್ಯಶಾಲಿ ಎಂದು ತಿಳಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…