ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಂತಹ ಹೀನಾಯ ಘಟನೆ ನಡೆದಿರುವುದು ಅತ್ಯಂತ ಖಂಡನೀಯ. ಘಟನೆ ನಡೆದು ಮೂರು ದಿನಗಳಾದರೂ ಇದುವರೆಗೂ ಯಾರನ್ನೂ ಬಂಧಿಸದೇ ಇರುವುದನ್ನು ನೋಡಿದರೆ ಪೊಲೀಸರ ನಡೆ ಅನುಮಾನಾಸ್ಪದವಾಗಿದೆ ಎಂದು ಪೊಲೀಸರ ವಿರುದ್ಧ ಸಂಶಯ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವರು ಕೂಡಲೇ ವಾಜಮಂಗಲ ಗ್ರಾಮಕ್ಕೆ ಭೇಟಿ ನೀಡಬೇಕು. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವವರನ್ನು ಕೂಡಲೇ ಬಂಧಿಸಬೇಕು. ಇದುವರೆಗೂ ಆರೋಪಿಗಳನ್ನು ಬಂಧಿಸದಿರುವುದು ಪೊಲೀಸ್ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಿಡಿಗೇಡಿಗಳ ವಿರುದ್ಧ ರಾಷ್ಟ್ರದ್ರೋಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು. ಮುಂದಿನ ಎಂಟು ದಿನಗಳ ಒಳಗೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೇ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಕಾಟಾಚಾರಕ್ಕೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸದೆ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…
ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…