ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಂತಹ ಹೀನಾಯ ಘಟನೆ ನಡೆದಿರುವುದು ಅತ್ಯಂತ ಖಂಡನೀಯ. ಘಟನೆ ನಡೆದು ಮೂರು ದಿನಗಳಾದರೂ ಇದುವರೆಗೂ ಯಾರನ್ನೂ ಬಂಧಿಸದೇ ಇರುವುದನ್ನು ನೋಡಿದರೆ ಪೊಲೀಸರ ನಡೆ ಅನುಮಾನಾಸ್ಪದವಾಗಿದೆ ಎಂದು ಪೊಲೀಸರ ವಿರುದ್ಧ ಸಂಶಯ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವರು ಕೂಡಲೇ ವಾಜಮಂಗಲ ಗ್ರಾಮಕ್ಕೆ ಭೇಟಿ ನೀಡಬೇಕು. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವವರನ್ನು ಕೂಡಲೇ ಬಂಧಿಸಬೇಕು. ಇದುವರೆಗೂ ಆರೋಪಿಗಳನ್ನು ಬಂಧಿಸದಿರುವುದು ಪೊಲೀಸ್ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಿಡಿಗೇಡಿಗಳ ವಿರುದ್ಧ ರಾಷ್ಟ್ರದ್ರೋಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು. ಮುಂದಿನ ಎಂಟು ದಿನಗಳ ಒಳಗೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೇ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಕಾಟಾಚಾರಕ್ಕೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸದೆ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…