ಮೈಸೂರು

ಅಂಬೇಡ್ಕರ್ ಪ್ರತಿಮೆ ಗೋಪುರ ಸ್ವಚ್ಛಗೊಳಿಸದೇ ಕಾಟಾಚಾರಕ್ಕೆ ಅಂಬೇಡ್ಕರ್ ಜಯಂತಿ ಆಚರಣೆ: ದಸಂಸ ಮುಖಂಡರ ಆಕ್ರೋಶ

ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯ ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಲಾಗಿದೆ.

ಗೋಪುರವು ಧೂಳಿನಿಂದ ಕೂಡಿದ್ದು, ಹಕ್ಕಿ ಪಕ್ಷಿಗಳ ಹಿಕ್ಕೆ ಮತ್ತು ಧೂಳನ್ನು ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದ ತಾಲ್ಲೂಕು ಆಡಳಿತ ತನ್ನ ಬೇಜವಾಬ್ದಾರಿ ತೋರಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗಿದ್ದು, ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಿದ್ದಾರೆ. ಯಾವುದೇ ಬಣ್ಣವನ್ನು ಬಳಿದಿಲ್ಲ. ಸಿಸಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಘಟನೆ ತಿಳಿದು ಸ್ಥಳಕ್ಕಾಗಮಿಸಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕ್ಷೇತ್ರದ ಮಾಜಿ ಶಾಸಕ ಬಿ ಹರ್ಷವರ್ಧನ್ ತರಾಟೆಗೆ ತೆಗೆದುಕೊಂಡು ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

27 mins ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

3 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

8 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

8 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

8 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

8 hours ago