ಮೈಸೂರು

ಸಮಾನತೆಗೆ ಅನನ್ಯ ಕೊಡುಗೆ ನೀಡಿದ ಅಂಬೇಡ್ಕರ್‌ : ಶಾಸಕ ರಮೇಶ್‌ ಬಂಡಿಸಿದ್ದೇಗೌಡ

– ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಅಂಬೇಡ್ಕರ್‌ ಜಯಂತಿ

ಮೈಸೂರು:  ದೇಶದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಅಂಬೇಡ್ಕರ್‌ ಕೊಡುಗೆ ಅಪಾರವಾಗಿದೆ. ಹೀಗಾಗಗಗಿ, ಅವರ ಚಿಂತನೆಗಳನ್ನು ನಾವೆಲ್ಲಾ ಪಾಲಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ನಗರದ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ದೇಶದ ಜನರಿಗೆ ಭದ್ರ ಬುನಾದಿ ಹಾಕಿಕೊಡಲು ಪ್ರಪಂಚದಾದ್ಯಂತ ಸಂಚರಿಸಿ, ಅಪಾರವಾದ ಅಧ್ಯಯನವನ್ನು ನಡೆಸಿದ ಅಂಬೇಡ್ಕರ್‌ ಅವರು ಭಾರತೀಯರಿಗೆ ಶ್ರೇಷ್ಠ ಸಂವಿಧಾನ ನೀಡಿದರು. ಆ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ, ವಾಕ್ ಸ್ವಾತಂತ್ರ್ಯ ಕಲ್ಪಿಸಿದ್ದಾರೆ. ಅಂಬೇಡ್ಕರ್‌ ಅವರ ದೀರ್ಘಕಾಲದ ಅಧ್ಯಯನ, ಅನೇಕ ವಿಚಾರಗಳು ಇಂದಿಗೂ ಜೀವಂತವಾಗಿದ್ದು, ಅವರ ಚಿಂತನೆಗಳು, ವಿಚಾರಗಳನ್ನು ನಾವುಗಳು ಜೀವನದಲ್ಲಿ ಪಾಲನೆ ಮಾಡಬೇಕಿದೆ” ಎಂದು ಸಲಹೆ ನೀಡಿದರು.

ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, “ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇಡೀ ವಿಶ್ವವೇ ಮೆಚ್ಚುವ ಶ್ರೇಷ್ಠ ಸಂವಿಧಾನವನ್ನು ಭಾರತೀಯರಿಗೆ ನೀಡಿದ್ದಾರೆ. ಅಂಬೇಡ್ಕರ್‌ ಅವರು ಭಾರತ ಕಂಡ ಅತ್ಯುನ್ನತ ಹಾಗೂ ಮಾನವರಿಗೆ ಸಮಾನತೆ  ಸಾರಿದ್ದಾರೆ. ಅವರ ಜನ್ಮದಿನವನ್ನು ವಿಶ್ವ ಜ್ಞಾನ ದಿನವನ್ನಾಗಿಯೂ ಆಚರಿಸಲಾಗುತ್ತಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ ಶಾಖೆ) ಶರಣಮ್ಮ ಎಸ್‌. ಜಂಗಿನ್‌, ಪ್ರಧಾನ ವ್ಯವಸ್ಥಾಪಕರು(ಆ ಮತ್ತು ಮಾ. ಸಂ) ಬಿ.ಆರ್. ರೂಪ‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ಆಂತರಿಕ ಪರಿಶೋಧನೆ) ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರು(ಖರೀದಿ) ಎಲ್‌. ಲೋಕೇಶ್‌ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

42 mins ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

44 mins ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

46 mins ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

4 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

4 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

4 hours ago