ಮೈಸೂರು

ಅಂಬೇಡ್ಕರ್‌ ಸ್ಮರಣೆಯೇ ಬೆಳಕು: ಪ್ರೊ.ಶಶಿಕಲಾ

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು.

ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ “ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ದಿನ’ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಕಟ್ಟಿಕೊಟ್ಟ ಸಂವಿಧಾನದಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ. ಸಂವಿಧಾನದ ನ್ಯಾಯಯುತ ಜಾರಿ ಆಗಬೇಕಿದೆ. ಅಂಬೇಡ್ಕರ್ ಅವರ ಸೈದ್ದಾಂತಿಕ ನೆಲೆಯಲ್ಲಿ ಸಮಾಜ ಕಟ್ಟಬೇಕಿದೆ. ಬೌದ್ಧ ಧರ್ಮದ ಸತ್ಯ ಪಾಲನೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ವಿ, ದೀಪವನ್ನು ಹಚ್ಚುವ ಮೂಲಕ ಅಂಬೇಡ್ಕರ್ ಅವರನ್ನು ಮತ್ತೆ ಮತ್ತೆ ನಮ್ಮೊಳಗೆ ಬೆಳಕಾಗಿ ರೂಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಭಾರತದ ಎಲ್ಲರಿಗಾಗಿ ಎಂಬುದನ್ನು ನೆನಪಿಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರು ತಮ್ಮ ಆರೋಗ್ಯಕ್ಕಿಂತ ದೇಶದ ಆರೋಗ್ಯ ಮುಖ್ಯವಾಗಿಸಿಕೊಂಡು, ದೇಶವನ್ನು ಕಟ್ಟಲು ತಮ್ಮ ಆರೋಗ್ಯವನ್ನು ನೀಡಿದರು. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬಂತೆ ನಾವು ಅಂಬೇಡ್ಕರ್ ಅವರ ನಿಬ್ಬಾಣವನ್ನು ಅರ್ಥ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವ್ಯವಸ್ಥಾಪನಾ ಕಾರ್ಯಧಿಕಾರಿ ಹೇಮಲತಾ, ಕುವೆಂಪು ಕನ್ನಡ ವಿಭಾಗದ ಉಪನ್ಯಾಸಕ ಸಿಬ್ಬಂದಿಗಳಾದ ತಲಕಾಡು ನಾಗರಾಜು, ನಂಜುಂಡಸ್ವಾಮಿ, ಸುರೇಶ್, ಶೈಲಾಜ, ಮಂಜುನಾಥ್, ಪ್ರಸನ್ನ, ವಿಭಾಗ ಬೋಧಕೇತರ ಸಿಬ್ಬಂದಿಗಳಾದ ಮೂರ್ತಿ, ಪಿ.ಎಂ.ಕುಮಾರ್, ಯೋಗೀಶ್, ನಾಗಮಣಿ, ಸಂಶೋಧನಾ ವಿದ್ಯಾರ್ಥಿಗಳಾ ಮೇಘ, ದಿವ್ಯಾ, ಮಹದೇವಮ್ಮ, ತೀರ್ಥ ಪ್ರಸಾದ್, ಪ್ರಸಾದ್, ಪ್ರತಾಪ್, ನಟರಾಜು, ಹನುಮಂತಪ್ಪ, ದಿಲೀಪ್ ಹಾಗೂ ಸ್ನಾತಕೊತ್ತರ ವಿದ್ಯಾರ್ಥಿಗಳು  ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

2 mins ago

ಕಾಸರಗೋಡು ಸೀಮೆಯಲ್ಲಿ ನಂಜನಗೂಡು ನರಸಣ್ಣ

ಅಕ್ಷತಾ ರಜೆಗೆ ಊರಿಗೆ ಬಂದಿದ್ದೆ. ಒಂದು ಬದಿಯಲ್ಲಿ ಬಂಟಾಜೆ ಕಾಡಿನಲ್ಲಿ ಹುಟ್ಟಿ ಸೀರೆ ನದಿಯನ್ನು ಸೇರುವ ತೊರೆ. ಇನ್ನೊಂದು ಬದಿಯಲ್ಲಿ…

14 mins ago

ಪ್ರಭುಸ್ವಾಮಿ ಬೆಟ್ಟದ ಅರೆಕಲ್ಲ ಮೇಲೆ ಎಡೆಪರು ಊಟ

'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…

43 mins ago

ಬೀದಿಗೆ ಬಿದ್ದವರಿಗೆ ಚಳಿಗಾಲ ಎಷ್ಟೊಂದು ನರಕ…

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…

46 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 14 ಭಾನುವಾರ

60 mins ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

13 hours ago