ಮೈಸೂರು

ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ವಿರೂಪ: ಸ್ಥಳದಲ್ಲಿ‌ ಬಿಗುವಿನ ವಾತಾವರಣ

ಮೈಸೂರು: ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್‌ಗಳನ್ನು ವಿರೂಪಗಳಿಸಿ ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಜರುಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ವ್ಯಾಪ್ತಿಗೆ ಬರುವ ವಾಜಮಂಗಲದಲ್ಲಿ ಈ ಕೃತ್ಯ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

ಏಪ್ರಿಲ್‌.14 ರಂದು ಇಲ್ಲಿನ ಸಿದ್ಧಾರ್ಥ ಯುವಕರ ಸಂಘವು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಿ, ಮೆರವಣಿಗೆ, ಅನ್ನದಾನ ಕಾರ್ಯಕ್ರಮ ಆಯೋಜನೆ ಮಾಡಿತ್ತು.

ಈ ಹಿನ್ನೆಲೆಯಲ್ಲಿ ರಸ್ತೆಯ ಅಕ್ಕಪಕ್ಕದಲ್ಲಿ ಹಾಗೂ ಗ್ರಾಮದ ಒಳಗಡೆ ಅಳವಡಿಸಿದ್ದ ಅಂಬೇಡ್ಕರ್ ಅವರ ಫ್ಲೆಕ್ಸ್, ಕಟೌಟ್‌ಗಳನ್ನು ಹರಿದು ವಿಕೃತ ಮೆರೆಯಲಾಗಿದ್ದು, ನೀಲಿ‌ ಧ್ವಜಗಳನ್ನು ಹರಿದು ಹಾಕಲಾಗಿದೆ.

ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಗ್ರಾಮದ ದಲಿತ ಮುಖಂಡರು ಭಾವಚಿತ್ರ ವಿರೂಪಗೊಳಿಸಿದವರನ್ನು ಬಂಧಿಸುವಂತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಅಂಬೇಡ್ಕರ್‌ ಅವರ ಭಾವಚಿತ್ರ ವಿರೂಪಗೊಳಿಸಿರುವವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago