Ambedkars portrait defaced in Vajamangala mysuru
ಮೈಸೂರು: ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್‌ಗಳನ್ನು ವಿರೂಪಗಳಿಸಿ ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಜರುಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ವ್ಯಾಪ್ತಿಗೆ ಬರುವ ವಾಜಮಂಗಲದಲ್ಲಿ ಈ ಕೃತ್ಯ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.
ಏಪ್ರಿಲ್.14 ರಂದು ಇಲ್ಲಿನ ಸಿದ್ಧಾರ್ಥ ಯುವಕರ ಸಂಘವು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಿ, ಮೆರವಣಿಗೆ, ಅನ್ನದಾನ ಕಾರ್ಯಕ್ರಮ ಆಯೋಜನೆ ಮಾಡಿತ್ತು.
ಈ ಹಿನ್ನೆಲೆಯಲ್ಲಿ ರಸ್ತೆಯ ಅಕ್ಕಪಕ್ಕದಲ್ಲಿ ಹಾಗೂ ಗ್ರಾಮದ ಒಳಗಡೆ ಅಳವಡಿಸಿದ್ದ ಅಂಬೇಡ್ಕರ್ ಅವರ ಫ್ಲೆಕ್ಸ್, ಕಟೌಟ್‌ಗಳನ್ನು ಹರಿದು ವಿಕೃತ ಮೆರೆಯಲಾಗಿದ್ದು, ನೀಲಿ ಧ್ವಜಗಳನ್ನು ಹರಿದು ಹಾಕಲಾಗಿದೆ.
ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್: ಕೂದಲೆಳೆ ಅಂತರದಲ್ಲಿ ಪಾರು
ಗ್ರಾಮದ ದಲಿತ ಮುಖಂಡರು ಭಾವಚಿತ್ರ ವಿರೂಪಗೊಳಿಸಿದವರನ್ನು ಬಂಧಿಸುವಂತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಅಂಬೇಡ್ಕರ್ ಅವರ ಭಾವಚಿತ್ರ ವಿರೂಪಗೊಳಿಸಿರುವವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…