Mysore
23
overcast clouds
Light
Dark

ಮೈಸೂರು: ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ಹೊತ್ತಿ ಉರಿದ ಆಂಬುಲೆನ್ಸ್‌!

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ನಡೆದಿದೆ.

ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, ಬೆಂಕಿಯಿಂದ ನಾಶಗೊಂಡ ಆಂಬುಲೆನ್ಸ್‌ನಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.

ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ನಗರದ ಹೆಬ್ಬಾಳ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: