Mysore
24
haze

Social Media

ಶನಿವಾರ, 10 ಜನವರಿ 2026
Light
Dark

ನಾಡದೇವತೆ ದರ್ಶನ ಪಡೆದ ಅಮಿತ್ ಶಾ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಅವರನ್ನು ಶಾಸಕ ಎಸ್.ಎ. ರಾಮದಾಸ್ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೇಯರ್ ಶಿವಕುಮಾರ್ ಮತ್ತಿತರರು ಇದ್ದರು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡ ಅಮೀತ್ ಶಾ, ಹೇಗಿದ್ದೀರಿ? ಚೆನ್ನಾಗಿದ್ದೀರಾ? ಎಂದು ಕುಶಲೋಪರಿ ವಿಚಾರಿಸಿ, ಬೆನ್ನು ತಟ್ಟಿದರು. ಬಳಿಕ ನನ್ನ ಜೊತೆ ಬನ್ನಿ ಎಂದು ಎಸ್.ಎ.ರಾಮದಾಸ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರು ಶಾ ಅವರನ್ನು ಸ್ವಾಗತಿಸಿ ದೇವಸ್ಥಾನದೊಳಗೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸಿದರು. ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ಅವರು, ಪ್ರಾರ್ಥನೆಯನ್ನು ಸಲ್ಲಿಸಿದರು.
ಬಳಿಕ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣಕ್ಕೆ ತೆರಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!