ಮೈಸೂರು

ಬಿಲ್ಡರ್‌ ಡೈರಿಯಲ್ಲಿದ್ದ ಮಾಹಿತಿ ಸ್ಫೋಟ

ಮುಡಾ 300ಕೋಟಿ ರೂ.ಅಕ್ರಮ ಆಸ್ತಿ ಪ್ರಕರಣ

ಕೆ. ಬಿ. ರಮೇಶನಾಯಕ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ೩೦೦ ಕೋಟಿ ರೂ. ಹಗರಣ ನಡೆದಿರುವುವನ್ನು ಜಾರಿ ನಿರ್ದೇಶನಾಲಯ ಬಯಲು ಮಾಡಿದ್ದು, ಇದಕ್ಕೆ ಬಿಲ್ಡರ್ ಒಬ್ಬರ ಡೈರಿಯೇ ಮೂಲ ಎಂದು ಹೇಳಲಾಗಿದೆ. ಇದಲ್ಲದೆ ಕೊಕನಟ್ ಎಂಬ ಕೋಡ್‌ವರ್ಡ್ ಒಂದನ್ನು ಡಿಕೋಡ್ ಮಾಡಿದಾಗ ಮತ್ತಷ್ಟು ಮಾಹಿತಿಗಳು ಬಹಿರಂಗವಾಗಿವೆ.

ಬಿಲ್ಡರ್ ಜಯರಾಮ್ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆ ಪತ್ರಗಳು ಮತ್ತು ಡೈರಿಯಲ್ಲಿ ಹಲವಾರು ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇದರ ಆಧಾರದ ಮೇಲೆ ಹಲವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮತ್ತೆ ವಿಚಾರಣೆ ನಡೆಸಲು ಅವರನ್ನು ಯಾವುದೇ ಕ್ಷಣ ದಲ್ಲಿ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವ್ಯವಹಾರಕ್ಕೆ ಕೋಡ್ ವರ್ಡ್: ಬೇನಾಮಿ ಆಸ್ತಿಯ ಉಸ್ತುವಾರಿ ಹೊತ್ತಿದ್ದ ಬಿಲ್ಡರ್ ಜಯ ರಾಮ್ ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಹೊಂದಿರುವ ಆಸ್ತಿಗಳಿಗೆ ಸಂಬಂಧಿಸಿದಂತೆ ನಡೆಸುತ್ತಿದ್ದ ವ್ಯವಹಾರದ ಕೋಡ್‌ವರ್ಡ್ ಬಯಲಾಗಿದ್ದು, ವಾಟ್ಸಾಪ್ ಮೆಸೇಜ್‌ನಲ್ಲಿ ಗೊತ್ತಾಗಿದೆ. ಬೇನಾಮಿ ವ್ಯವಹಾರ ಮಾಡುವಾಗ ವೈಟ್ ಮತ್ತು ಬ್ಲಾಕ್ ಮನಿಯ ಬಗ್ಗೆ ಗುಟ್ಟು ಬಿಟ್ಟುಕೊಡ ದಿರಲು ಕೊಕನಟ್ ಎನ್ನುವ ಕೋಡ್‌ವರ್ಡ್ ಬಳಸುತ್ತಿದ್ದರು. ಒಂದು ಕೊಕನಟ್ ಎಂದರೆ ೧ ಲಕ್ಷ ರೂ. , ೫೦ ಕೊಕನಟ್ ಅಂದರೆ ೫೦ ಲಕ್ಷ ರೂ. , ೧೦೦ ಕೊಕ ನಟ್ ಅಂದರೆ ಒಂದು ಕೋಟಿ ರೂ. ರವಾನೆಯಾಗುತ್ತಿತ್ತು. ಡೈರಿಯಲ್ಲಿ ಸಿಕ್ಕಿದ್ದ ದಾಖಲೆಗಳಿಗೂ ಮತ್ತು ವಾಟ್ಸಾಪ್‌ನಲ್ಲಿ ರವಾನೆಯಾಗುತ್ತಿದ್ದ ಮೆಸೇಜ್ ಗಳಿಗೂ ತಾಳೆ ಆಗಿದೆ. ಹೀಗಾಗಿ, ಅಕ್ರಮ ಹಣ ವರ್ಗಾವಣೆ ಹೆಸರಿನಲ್ಲಿ ಶಾಮೀಲಾಗಿರುವ ಹಲವರನ್ನು ವಿಚಾರಣೆ ನಡೆಸಲು ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಪತ್ತೆಯಾಗಿದ್ದು ಹೇಗೆ ?: ವಿಜಯನಗರದಲ್ಲಿ ೧೪ ನಿವೇಶನಗಳನ್ನು ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಽಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ೧೮೬೦ರ ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, ೧೯೮೮ರ ಅಡಿಯಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ತನಿಖೆ ಶುರು ಮಾಡಿದ ಇ. ಡಿ. ಅಽಕಾರಿಗಳು ಬಿಲ್ಡರ್ ಜಯರಾಮ್ ಮನೆ, ಕಚೇರಿಯ ಮೇಲೆ ಅಕ್ಟೋಬರ್ ೨೯ರಂದು ದಾಳಿ ನಡೆಸಿ ಸತತ ೭೦ ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಲವಾರು ಬೇನಾಮಿ ಆಸ್ತಿಗಳ ದಾಖಲೆಗಳು, ದಿನನಿತ್ಯದ ಚಟುವಟಿಕೆಗಾಗಿ ಬಳಸುತ್ತಿದ್ದ ಡೈರಿ ಪತ್ತೆಯಾಗಿತ್ತು.

ನಂತರ, ಮತ್ತಷ್ಟು ಆಳಕ್ಕೆ ಇಳಿದ ಅಧಿಕಾರಿಗಳು ಜಯರಾಮ್ ಮನೆ ಮೇಲೆ ಎರಡನೇ ಬಾರಿ ದಾಳಿ ನಡೆಸಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿ ದಾಗ ಬೇನಾಮಿ ಹಗರಣಗಳು ಬಯಲಾಗಿವೆ. ಇ. ಡಿ. ಸುದೀರ್ಘ ತನಿಖೆ ನಂತರ ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಹೆಸರಿನಲ್ಲಿ ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ಬೇನಾಮಿ ಆಸ್ತಿ ಇರುವುದು ಪತ್ತೆಯಾಗಿದೆ. ಹಲವು ಶಾಸಕರು, ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ಆಸ್ತಿ ಇರುವುದನ್ನು ಜಯರಾಮ್‌ ತನಿಖೆ ವೇಳೆ ಬಾಯಿ ಬಿಟ್ಟಿದ್ದಾರೆ. ಮುಡಾ ಮಾಜಿ ಆಯುಕ್ತ ಜಿ. ಟಿ. ದಿನೇಶ್‌ಕುಮಾರ್ ಸಂಬಂಧಿ ತೇಜಸ್‌ಗೌಡ ಹೆಸರಿನಲ್ಲಿ ಬೇನಾಮಿ ಆಸ್ತಿ ಸಂಗ್ರಹಿಸಿರುವುದನ್ನು ಒಪ್ಪಿಕೊಂಡಿರುವುದರಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಲೋಕಾಯುಕ್ತ ವರದಿ ಮೇಲೂ ಪರಿಣಾಮ: ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಜ. ೨೫ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿರುವ ಹೊತ್ತಿನಲ್ಲೇ ಇ. ಡಿ. ಬಿಡುಗಡೆ ಮಾಡಿರುವ ಪ್ರಾಥಮಿಕ ತನಿಖಾ ವರದಿ ದೊಡ್ಡ ಪರಿಣಾಮ ಬೀರುವಂತೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಪತ್ನಿ ಪಾರ್ವತಿ, ಜಮೀನಿನ ಮಾಲೀಕ ದೇವರಾಜು, ಸಿಎಂ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಆಯುಕ್ತ ಡಾ. ಡಿ. ಬಿ. ನಟೇಶ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಜಿ. ಕುಮಾರನಾಯಕ್, ಎಸ್. ಪಾಲಯ್ಯ, ಐಎಎಸ್ ಅಧಿಕಾರಿ ಎಚ್. ಎಂ. ಕಾಂತರಾಜು, ನಿವೃತ್ತ ಕೆಎಎಸ್ ಅಧಿಕಾರಿ ಡಾ. ಸಿ. ಜಿ. ಬೆಟಸೂರಮಠ ಅವರನ್ನು ವಿಚಾರಣೆಗೊಳಪಡಿಸಿರುವ ಲೋಕಾಯುಕ್ತ ಅಧಿಕಾರಿಗಳು ವರದಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲು ದಿನಗಣನೆ ಶುರುವಾಗಿದೆ.

ಮುಡಾ ಹಗರಣದಲ್ಲಿ ಬಗೆದಷ್ಟು ಹಗರಣಗಳ ಸತ್ಯ ಬಯಲಾಗು ತ್ತಿರುವುದರಿಂದ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳಲ್ಲಿ ನಡುಕ ಮೂಡಿಸಿದೆ ಇದರ ಬೆನ್ನಲ್ಲೇ ಇ. ಡಿ. ಸಿಎಂ ಪತ್ನಿಗೆ ಮಂಜೂರಾಗಿರುವ ನಿವೇಶನ ಸೇರಿದಂತೆ ೧೪೨ ಸ್ಥಿರಾಸ್ಥಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಕಾರಣ ನ್ಯಾಯಾಲಯ ಯಾವ ನಿಲುವು ತಾಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

44 mins ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

53 mins ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

7 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

7 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

7 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

7 hours ago