Mysore
20
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ ಕೊನೆಗೂ ರಾಜೀನಾಮೆ ಅಂಗೀಕಾರ

ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಜೂನ್‌ 2 ರಂದು ಅಣ್ಣಾಮಲೈ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಕೆಯಾದ ಬಳಿಕ ಅವರು ಬಿಜೆಪಿಯಲ್ಲೇ ಇರುತ್ತಾರೆ. ರಾಜ್ಯಸಭೆಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಈ ಎಲ್ಲಾ ಅಂತ ಕಂತೆ ಸುದ್ದಿಗಳಿಗೆ ವಿರಾಮ ಬಿದ್ದಿದೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯನ್ನು ತಿಳಿಸಲಿದ್ದಾರೆ.

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

Tags:
error: Content is protected !!