ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.
ಜೂನ್ 2 ರಂದು ಅಣ್ಣಾಮಲೈ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಕೆಯಾದ ಬಳಿಕ ಅವರು ಬಿಜೆಪಿಯಲ್ಲೇ ಇರುತ್ತಾರೆ. ರಾಜ್ಯಸಭೆಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಈ ಎಲ್ಲಾ ಅಂತ ಕಂತೆ ಸುದ್ದಿಗಳಿಗೆ ವಿರಾಮ ಬಿದ್ದಿದೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯನ್ನು ತಿಳಿಸಲಿದ್ದಾರೆ.
ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…