Mysore
18
clear sky

Social Media

ಮಂಗಳವಾರ, 06 ಜನವರಿ 2026
Light
Dark

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು: ಗಡಿಪಾರು ಮಾಡುವಂತೆ ಒತ್ತಾಯ

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್‌ಐಆರ್‌ ದಾಖಲಿಸಿ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್‌ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ  ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನ ಬಳಿ ಬಂದು, ಹಣದ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರು ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರೆಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.

ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯಾದ್ಯಂತ 44ಪ್ರಕರಣ ದಾಖಲಾಗಿದೆ. ಇದರಲ್ಲಿ 22 ಪ್ರಕರಣಗಳ ಎಫ್‌ಐಆರ್‌ ನಮ್ಮಲ್ಲಿವೆ. ಆತ ರೌಡಿಶೀಟರ್‌ ಆಗಿದ್ದರು ಪೊಲೀಸರುವ ಮೂರು ವರ್ಷದಿಂದ ಕ್ರಮತೆಗೆದುಕೊಂಡಿಲ್ಲ. ಇಂತಹ ಬ್ಲಾಕ್‌ ಮೇಲರ್‌ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಿಗ್ಗೆ 10 ಗಂಟೆ ಒಳಗೆ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಕಾಂಗ್ರೆಸ್‌ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ ವಿಜಯ್‌ ಕುಮಾರ್‌, ನಗರದ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.

Tags:
error: Content is protected !!