ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ.
ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್‌ಐಆರ್ ದಾಖಲಿಸಿ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಇಲ್ಲವಾದರೆ ಪೊಲೀಸ್ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದೆ.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನ ಬಳಿ ಬಂದು, ಹಣದ ಬೇಡಿಕೆ ಇಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರು ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರೆಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.
ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯಾದ್ಯಂತ 44ಪ್ರಕರಣ ದಾಖಲಾಗಿದೆ. ಇದರಲ್ಲಿ 22 ಪ್ರಕರಣಗಳ ಎಫ್‌ಐಆರ್ ನಮ್ಮಲ್ಲಿವೆ. ಆತ ರೌಡಿಶೀಟರ್ ಆಗಿದ್ದರು ಪೊಲೀಸರುವ ಮೂರು ವರ್ಷದಿಂದ ಕ್ರಮತೆಗೆದುಕೊಂಡಿಲ್ಲ. ಇಂತಹ ಬ್ಲಾಕ್ ಮೇಲರ್ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಭಾನುವಾರ ಬೆಳಿಗ್ಗೆ 10 ಗಂಟೆ ಒಳಗೆ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಠಾಣೆ ಎದರು ಅನಿರ್ದಿಷ್ಟಾವಧಿ ಧರಣಿ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ನಗರದ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…