ಮೈಸೂರು

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ 25 ಕೆಜಿ ಮೆಫೆಡ್ರೋನ್‌, 1.6 ಕೆಜಿ ಅಫೀಮು ಮತ್ತು 25 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ.

ಈ ಸಂಬಂಧ ರಾಜಸ್ಥಾನದ ಜಾಲೋರ್‌ ಜಿಲ್ಲೆಯ ಮಹೇಂದ್ರ ಕುಮಾರ್‌ ಬಿಷ್ಣೋಯ್‌ ಸೇರಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಎನ್‌ಸಿಬಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಪಿಗಳ ಬಂಧನದ ಬಳಿಕ ಎನ್‌ಸಿಬಿಯ ಬೆಂಗಳೂರು ವಲಯ ಘಟಕವು ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಘಟಕ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳು ಮತ್ತು ಡ್ರಗ್ಸ್ ತಯಾರಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆದಿದೆ ಎಂದು ಎನ್​​ಸಿಬಿ ತಿಳಿಸಿದೆ.

ಈ ಪ್ರಕರಣದಲ್ಲಿ ಇದುವರೆಗೆ 10 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳು, 25.6 ಲಕ್ಷ ರೂ.ನಗದು, ಟೊಯೋಟಾ ಫಾರ್ಚೂನರ್ ಎಸ್‌ಯುವಿ ಮತ್ತು 500 ಕೆಜಿಗಿಂತ ಹೆಚ್ಚು ತೂಕದ ಡ್ರಗ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೈಲಿನಲ್ಲಿದ್ದಾಗ ಡ್ರಗ್ಸ್ ತಯಾರಿಕೆ ಕಲಿತಿದ್ದ ಮಾಸ್ಟರ್ ಮೈಂಡ್
ಜೈಲಿನಲ್ಲಿದ್ದಾಗ ಡ್ರಗ್ಸ್ ತಯಾರಿಕೆಯನ್ನು ಕಲಿತಿದ್ದ ಮಾಸ್ಟರ್ ಮೈಂಡ್ ಮಹೇಂದ್ರ ಕುಮಾರ್, ಜಾಮೀನಿನ ಮೇಲೆ ಹೊರಬಂದ ಬಳಿಕ ಮೈಸೂರಿನಲ್ಲಿ ಈ ರಹಸ್ಯ ಪ್ರಯೋಗಾಲಯ ಸ್ಥಾಪಿಸಿದ್ದ ಎಂದು ಎನ್​ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಅಫೀಮ್ ಮತ್ತು ಸ್ಮ್ಯಾಕ್ ಮಾರಾಟ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪಿ ಬಿಷ್ಣೋಯ್, ಎನ್‌ಡಿಪಿಎಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗಲೇ ಸಿಂಥಟಿಕ್ ಡ್ರಗ್ಸ್ ತಯಾರಿಕೆಯ ಪ್ರಕ್ರಿಯೆ, ಮಾರುಕಟ್ಟೆ ಬೇಡಿಕೆ ಮತ್ತು ಸರಬರಾಜು ಜಾಲದ ಬಗ್ಗೆ ತಿಳಿದುಕೊಂಡಿದ್ದ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, 2024ರಲ್ಲಿ ಮೈಸೂರಿನಲ್ಲಿ ಗುಪ್ತವಾಗಿ ಉತ್ಪಾದನಾ ಘಟಕ ಸ್ಥಾಪಿಸಿ, ಅನೇಕ ಬಾರಿ ಡ್ರಗ್ಸ್ ಉತ್ಪಾದನೆ ಮತ್ತು ವಿತರಣೆ ನಡೆಸಿದ್ದ.

ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿದ್ದ ಘಟಕದಲ್ಲಿ ಡ್ರಗ್ಸ್ ತಯಾರಿಕೆಗೆ ಅಗತ್ಯವಿರುವ ಅತ್ಯಾಧುನಿಕ ಉಪಕರಣಗಳು ಮತ್ತು ಸಂಪೂರ್ಣ ಪ್ರಯೋಗಾಲಯ ವ್ಯವಸ್ಥೆ ಪತ್ತೆಯಾಗಿದೆ. ಈವರೆಗೆ ಬಂಧಿತರಾದ ನಾಲ್ವರೂ ರಾಜಸ್ಥಾನದ ಜಾಲೋರ್ ಜಿಲ್ಲೆಯವರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಸದಸ್ಯರು, ಪ್ರಯೋಗಾಲಯ ಉಪಕರಣಗಳು ಮತ್ತು ರಾಸಾಯನಿಕಗಳ ಸರಬರಾಜು ಮೂಲ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ. ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕ ನಡೆಸುತ್ತಿದ್ದ ಗಣಪತ್ ಎಂಬ ವ್ಯಕ್ತಿಯನ್ನು ಎನ್‌ಸಿಬಿ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದೆ ಎಂದು ತಿಳಿದುಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago