ಮೈಸೂರು

ಮೈಸೂರು ಮುಕುಟಕ್ಕೆ ಮತ್ತೊಂದು ಗರಿ: 3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣ

ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಹೆಗ್ಗಳಿಕೆಯ ಮೈಸೂರು ಶೀಘ್ರದಲ್ಲಿಯೇ ” ಗಾಂಧಿ ಭವನ” ಎಂಬ ಗರಿಯನ್ನು ತನ್ನ ಮುಕುಟಕ್ಕೆ ಸಿಕ್ಕಿಸಿಕೊಳ್ಳಲಿದೆ.

ಮಹಾತ್ಮ ಗಾಂಧಿಯವರ ಚಿಂತನೆಗಳು, ತತ್ವ, ಆದರ್ಶ, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳೊಂದಿಗೆ, ಗಾಂಧಿಯವರ ಸರಳ ಜೀವನ, ಸತ್ಯಾಗ್ರಹ, ಗುಡಿ ಕೈಗಾರಿಕೆಗಳಿಗೆ ನೀಡಿದ ಪ್ರೋತ್ಸಾಹ, ಮಕ್ಕಳು ಮಹಿಳೆಯರು, ದಲಿತ, ಹಿಂದುಳಿದವರ ಬಗೆಗೆ ಅವರಿಗಿದ್ದ ಕಾಳಜಿ, ತುಡಿತಗಳ ಅನಾವರಣ ಗಾಂಧಿ ಭವನದಲ್ಲಿ ಆಗಲಿದೆ.

ನಗರದ ಬನ್ನೂರು ರಸ್ತೆಯ ಹೊಸ ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿ ಸದ್ದಿಲ್ಲದೇ ನಿರ್ಮಾಣ ವಾಗುತ್ತಿರುವ ಗಾಂಧಿಭವನದ ಶೇ 70 ರಷ್ಟು ಕಾಮಗಾರಿ ಪೂರ್ಣಗೊಂಡು, ಮುಂದಿನ ಮೂರ್ನಾಕು ತಿಂಗಳಲ್ಲಿ ಉದ್ಘಾಟನೆಗೆ ಸಿದ್ದಗೊಳ್ಳಲಿದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ತಮ್ಮ ಮೊದಲ ಅವಧಿಯಲ್ಲಿ ಅಂದರೆ 2016- 17 ರ ಆಯವ್ಯದಲ್ಲಿ ಗಾಂಧೀಜಿಯವರ ವಿಚಾರಧಾರೆಗಳನ್ನು ಪ್ರಚುರಪಡಿಸಲು ಅನುಕೂಲವಾಗುವಂತೆ , ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಇಲಾಖೆಯ ಮಖಾಂತರ ರೂ.3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣವನ್ನ ಘೋಷಿಸಿದ್ದರು.

ಗಾಂಧಿ ಭವನದಲ್ಲಿ ವರ್ಷಪೂರ್ತಿ ಕಾರ್ಯ ಚಟುವಟಿಕೆಗಳು ಹಾಗೂ ತರಬೇತಿಗಳನ್ನು ನಡೆಸಲು ಉದ್ದೇಶಿಸಲಾಗಿರುತ್ತದೆ. ಕಾಲಕಾಲಕ್ಕೆ ಸಭೆ, ಸಮಾರಂಭಗಳನ್ನು ನಡೆಸಿ ಗಾಂಧೀಜಿಯವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ.

ಅದರಂತೆ ಮೈಸೂರು ಜಿಲ್ಲೆಯಲ್ಲಿಯೂ 1 ಎಕರೆ ವಿಶಾಲವಾದ ಪ್ರದೇಶದಲ್ಲಿ ಗಾಂಧಿಭವನ ತಲೆಎತ್ತುತಿದ್ದು 100*100 ಅಳತೆಯ ಭವ್ಯ ಕಟ್ಟಡ ನಿರ್ಮಾಣವಾಗುತ್ತಿದೆ ಕಟ್ಟಡದಲ್ಲಿ ಗ್ರಂಥಾಲಯ, ವಾಚನಾಲಯ,ವಿವಿದೋದ್ದೇಶ ಸಭಾಂಗಣ, ತರಬೇತಿ ಕೇಂದ್ರ ಗಾಂಧಿಯವರ ಜೀವನದ ವಿವಿಧ ಹಂತಗಳ ಪೋಟೋ ಗ್ಯಾಲರಿ, 100 ಜನ ಕುಳಿತುಕೊಳ್ಳಬಹುದಾದ ಸಭಾಂಗಣ, ಸುಂದರ ಆಕೃತಿಗಳ ಒಳಾಂಗಣ, ಕಛೇರಿ ಕೋಣೆ ಸೇರಿದಂತೆ, ಕಟ್ಟಡದ ಹಿಂಭಾಗದಲ್ಲಿ ಶೌಚಾಲಯ, ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ ಇರಲಿದೆ.

ಕಟ್ಟಡದ ಮುಂಭಾಗದ ಅಂಗಳದಲ್ಲಿ ಹುಲ್ಲುಹಾಸಿನ ನಡುವೆ ಗಾಂಧಿಯವರ ವಿವಿಧ ಕಲಾಕೃತಿಗಳು, ಸ್ವಾತಂತ್ರ್ಯ ಸಂಗ್ರಾಮದ ಪೋಟೋಗಳು, ದೆಹಲಿಯ ಪಾರ್ಲಿಮೆಂಟ್ ಮುಂಭಾಗದಲ್ಲಿರುವ ಗ್ಯಾರಾ ಮೂರ್ತಿ ಆಕೃತಿ ತಲೆ ಎತ್ತಲಿದೆ.

ಜಿಲ್ಲಾಮಟ್ಟದಲ್ಲಿ ಗಾಂಧಿ ಭವನ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದ ಸಮಿತಿಯಿದ್ದು, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ವರಿಷ್ಠಾಧಿಕಾರಿಗಳು ಸದಸ್ಯರಿದ್ದು ಜಿಲ್ಲಾ ವಾರ್ತಾಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಒಟ್ಟಾರೆಯಾಗಿ ಗಾಂಧಿ ಭವನ ಗಾಂಧಿ ಪ್ರಿಯರು, ಗಾಂಧಿವಾದಿಗಳು, ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ಗಾಂಧಿಯವರನ್ನ ಅರಿಯುವ ಹಾಗೂ ಪಿಕ್ನಿಕ್ ಪ್ರಿಯರಿಗೆ ಒಂದರ್ಧದಿನ ಕಳೆಯಲು ಒಂದು ಉತ್ತಮ ತಾಣವಾಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

5 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

6 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

10 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

12 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

13 hours ago