ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್ ಎಲ್ಇಡಿ ತಾರಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಸುಮಾರು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ತಾರಾಲಯವು, ವಿಶ್ವದ ಮೊದಲ 15 ಡಿಗ್ರಿ ಓರೆಯಾದ ಎಲ್ಇಡಿ ಡೋಮ್ ತಾರಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಓರೆಯಾದ ಎಲ್ಇಡಿ ಗುಮ್ಮಟದಲ್ಲಿ ನಕ್ಷತ್ರಗಳು, ಗ್ರಹಗಳು ಹಾಗೂ ಆಕಾಶಗಂಗೆಯ ದೃಶ್ಯಗಳನ್ನು ಕಣ್ತುಂಬಿಕೊಳ್ಳುವ ವಿಶಿಷ್ಟ ಅನುಭವ ಇಲ್ಲಿ ದೊರೆಯಲಿದೆ.
ತಾರಾಲಯವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದರು. ಕಾರ್ಯಕ್ರಮ ಮುಕ್ತಾಯದ ಬಳಿಕ ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು.




