Mysore
26
clear sky

Social Media

ಗುರುವಾರ, 29 ಅಕ್ಟೋಬರ್ 2026
Light
Dark

ಮತ್ತಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಮುರುಘಾ ಶ್ರೀ ವಿರುದ್ಧ ಮತ್ತೊಂದು FIR ದಾಖಲು

 ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ ವಿರುದ್ಧ ಇದೀಗ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಇಬ್ಬರು ಬಾಲಕಿಯರಿಂದ ಮುರುಘಾ ಮಠದ ಶ್ರೀ ವಿರುದ್ಧ ದೂರು ನೀಡಲಾಗಿದ್ದು, ಮೈಸೂರಿನ ನಜರಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಶುಕ್ರವಾರ ಕೇಸ್ ವರ್ಗಾವಣೆಯಾಗಿದೆ. ಮೈಸೂರು ಪೊಲೀಸರು ಚಿತ್ರದುರ್ಗ ಠಾಣೆಯಿಂದ ಮಾಹಿತಿ ಪಡೆದುಕೊಳ್ಳುತ್ತಾರೆ. ಎಫ್ಐಆರ್ ಕಾಪಿ ತಂದು ಕೊಟ್ಟ ಬಳಿಕ ಚಿತ್ರದುರ್ಗದಲ್ಲಿ ಕೇಸ್ ದಾಖಲಾಗುತ್ತದೆ. ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ಧಾರೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!