ಮೈಸೂರು

ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ

ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಹಲ್ಲರೆ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಇನ್ನು ಕೆಳದ ಕೆಲ ದಿನಗಳ ಹಿಂದಷ್ಟೆ ಸಿಎಂ ಸ್ವಕ್ಷೇತ್ರ ವಾಜಮಂಗಲ‌ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ.

ಕಳೆದ ವರ್ಷ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಈ ಗ್ರಾಮದಲ್ಲಿ ಭಾರೀ ಗಲಾಟೆ ಉಂಟಾಗಿತ್ತು. ಪ್ರಕರಣ ಸಂಬಂಧ ಸುಮಾರು 30ಕ್ಕೂ ಹೆಚ್ಚು ಜನರ ವಿರುದ್ದ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಹಾಗೂ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ಸಂಧಾನ ಸಭೆ ನಡೆಸಿ ಅಂಬೇಡ್ಕರ್ ನಾಮಫಲಕ ಅಳವಡಿಸಲಾಗಿತ್ತು.

ಹೀಗಿರುವಾಗಲೇ ನಿನ್ನೆ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಸಿಸಿ‌ ಕ್ಯಾಮರಾ ಕಾರ್ಯನಿರ್ವಹಿಸದ ಸಮಯ ನೋಡಿ ಕಿಡಿಗೇಡಿಗಳು ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

2 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

3 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

3 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

3 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

3 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

4 hours ago