Mysore
31
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.

ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್‌ ಅವರ ಫಾರ್ಮ್‌ಹೌಸ್‌ನಲ್ಲಿ ಸಂರಕ್ಷಿತ ಹಾಗೂ ಅಪರೂಪದ ವಲಸೆ ಹಕ್ಕಿಗಳ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಪಟ್ಟೆ ತಲೆ ಹೆಬ್ಬಾತು ಪಕ್ಷಿಗಳನ್ನು ಕಾನೂನುಬಾಹಿರವಾಗಿ ಪಂಜರದಲ್ಲಿ ಕೂಡಿ ಹಾಕಿ ಸಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇದೀಗ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಸಮನ್ಸ್‌ ಕೂಡ ಜಾರಿಯಾಗಿದೆ.

ಈಗಾಗಲೇ ರೇಣುಕಾಸ್ವಾಮಿ ಪ್ರಕರಣದಲ್ಲಿ ಕಾನೂನು ಹೋರಾಟ ಎದುರಿಸುತ್ತಿರುವ ನಟ ದರ್ಶನ್‌ಗೆ, ಫಾರ್ಮ್‌ಹೌಸ್‌ನಲ್ಲಿನ ಪಕ್ಷಿ ವಿವಾದ ಮತ್ತೊಂದು ಕಾನೂನು ಸವಾಲಾಗಿ ಪರಿಣಮಿಸಿದೆ.

Tags:
error: Content is protected !!