ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.
ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ಸಂರಕ್ಷಿತ ಹಾಗೂ ಅಪರೂಪದ ವಲಸೆ ಹಕ್ಕಿಗಳ ವಿಚಾರವಾಗಿ ಪ್ರಕರಣ ದಾಖಲಾಗಿದೆ.
ಪಟ್ಟೆ ತಲೆ ಹೆಬ್ಬಾತು ಪಕ್ಷಿಗಳನ್ನು ಕಾನೂನುಬಾಹಿರವಾಗಿ ಪಂಜರದಲ್ಲಿ ಕೂಡಿ ಹಾಕಿ ಸಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇದೀಗ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಸಮನ್ಸ್ ಕೂಡ ಜಾರಿಯಾಗಿದೆ.
ಈಗಾಗಲೇ ರೇಣುಕಾಸ್ವಾಮಿ ಪ್ರಕರಣದಲ್ಲಿ ಕಾನೂನು ಹೋರಾಟ ಎದುರಿಸುತ್ತಿರುವ ನಟ ದರ್ಶನ್‌ಗೆ, ಫಾರ್ಮ್‌ಹೌಸ್‌ನಲ್ಲಿನ ಪಕ್ಷಿ ವಿವಾದ ಮತ್ತೊಂದು ಕಾನೂನು ಸವಾಲಾಗಿ ಪರಿಣಮಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…