ಮೈಸೂರು

ಡಿಜಿಪಿ ರಾಮಚಂದ್ರ ರಾವ್‌ಗೆ ಇನ್ನೊಂದು ಸಂಕಷ್ಟ: 11 ವರ್ಷಗಳ ಹಿಂದಿನ ಕೇಸ್‌ ಅನ್ನು ತನಿಖೆ ನಡೆಸುವಂತೆ ಸಿಬಿಐಗೆ ಪತ್ರ ಬರೆದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರಿಗೆ, ಪುತ್ರಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್‌ ದರೋಡೆ ಪ್ರಕರಣವನ್ನು ರಿ-ಓಪನ್‌ ಮಾಡಿ ತನಿಖೆ ನಡೆಸುವಂತೆ ಸಿಬಿಐಗೆ ದೂರುದಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹೌದು, ರಾಮಚಂದ್ರ ಅವರಿಗೆ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಲಮಗಳು ರನ್ಯಾ ಅವರಿಂದ ಯಾವಾಗ ಬೇಕಾದರೂ ಡಿಆರ್‌ಐ, ಸಿಬಿಐ ಹಾಗೂ ಇ.ಡಿ. ತನಿಖಾ ಸಂಸ್ಥೆಗಳಿಂದ ತನಿಖಾ ವಿಚಾರಣೆ ಎದುರಾಗುವ ಸಾಧ್ಯತೆ ಇದೆ. ಈ ಮಧ್ಯೆಯೇ ಅವರಿಗೆ 2014ರ ಪ್ರಕರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ, ಇಲವಾಲ ದರೋಡೆ ಪ್ರಕರಣವನ್ನು ಮತ್ತೆ ರಿ-ಓಪನ್‌ ಮಾಡಿ ತನಿಖೆ ನಡೆಸಬೇಕು ಎಂದು ಸಿಬಿಐಗೆ 9 ಪುಟಗಳ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?

11 ವರ್ಷಗಳ ಹಿಂದೆ 2.27 ಕೋಟಿ ರೂ. ಹಾಗೂ 2 ಕೆ.ಜಿ. ಚಿನ್ನ ದರೋಡೆ ಮಾಡಿದ ಕುರಿತು ಪೊಲೀಸರ ವಿರುದ್ಧವೇ ದೂರು ದಾಖಲಾಗಿತ್ತು. ಈ ಬಗ್ಗೆ ಸಿಐಡಿ ತನಿಖೆಯೂ ನಡೆದಿತ್ತು. ಆ ವೇಳೆ ಐಜಿಪಿ ರಾಮಚಂದ್ರ ರಾವ್ ಗನ್‌ಮ್ಯಾನ್ ಹಾಗೂ ಸೌತ್ ಪೊಲೀಸ್ ಠಾಣೆ ಸಿಬ್ಬಂದಿ ಸೇರಿ ಡಿವೈಎಸ್‌ಪಿ ಸ್ಕ್ವಾಡ್ ಮೇಲೆ ದರೋಡೆ ಆರೋಪ ಬಂದಿತ್ತು. ಆದರೆ ಈ ಕೇಸ್‌ನಲ್ಲಿ ವಿಚಾರಣೆ ನಡೆದು ಎಲ್ಲರೂ ಆರೋಪ ಮುಕ್ತರಾಗಿದ್ದರು.

ಸಿಐಡಿ ಅಧಿಕಾರಿಗಳು ಇಲ್ಲಿಯವರೆಗೂ ಗೋಲ್ಡ್ ಸ್ಮಗ್ಲಿಂಗ್ ಮತ್ತು ಹವಾಲ ಹಣದ ಮೂಲದ ಬಗ್ಗೆ ಯಾವುದೇ ತನಿಖೆ ನಡೆಸಿರಲಿಲ್ಲ. ಆದರೆ ಇದೀಗ ಈ ಪ್ರಕರಣವನ್ನು ಮರುಜೀವ ನೀಡಿ ತನಿಖೆ ನಡೆಸಬೇಕೆಂದು ದೂರು ನೀಡಿದ್ದಾರೆ. ಈ ದೂರಿನೊಂದಿಗೆ ವೀಡಿಯೋ ಸಾಕ್ಷಿಗಳು ಹಾಗೂ ಇತರ ದಾಖಲೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ 2014 ರಿಂದಲೇ ಗೋಲ್ಡ್‌ ಸ್ಮಗ್ಲಿಂಗ್‌ ನಡೆದುಕೊಂಡು ಬರುತ್ತಿದೆ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಪ್ರಕರಣದಲ್ಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಿದ್ದರೆ ಇಂತಹ ಪ್ರಕರಣ ಮರುಕಳಿಸುವುದನ್ನು ತಡೆಯಬಹುದಿತ್ತು. ಹೀಗಾಗಿ ಈ ಕೇಸ್‌ ಅನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

49 mins ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

9 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

9 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

9 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

9 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

9 hours ago