ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ್ದಕ್ಕಾಗಿ ಕ್ಷಮೆ ಕೇಳಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸ್ಪಷ್ಟ ಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಆರೋಪ ಮಾಡಿರುವ ಎಲ್ಲಾ ವಿಚಾರವನ್ನು ಒಪ್ಪಿಕೊಂಡು, ಅದಕ್ಕೆ ಪೂರಕವಾಗಿ ಎಲ್ಲಾ ಮಾಹಿತಿ, ಸಾಕ್ಷ್ಯಾಧಾರಗಳನ್ನು ನೀಡಿದ್ದ ವಿನೋದ್ ಈ ಒಂದು ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾನೆ. ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಪ್ರಭಾವಿಗೆ ಲಂಚ ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾನೆ, ಅದಕ್ಕೆ ಪೂರಕವಾಗಿ ಕೆಲವು ಸಾಕ್ಷ್ಯಾಧಾರಗಳನ್ನು ನೀಡಿದ್ದಾನೆ, ಅದನ್ನು ಆಧರಿಸಿ, ತನಿಖೆ ನಡೆಸಿದಾಗ, ಪ್ರಭಾವಿ ಯಾರು? ಎಂಬ ಸತ್ಯ ತಿಳಿಯುತ್ತದೆ ಎಂದಿದ್ದಾರೆ.
14 ನಿವೇಶನಗಳನ್ನು ಕಾನೂನು ಬದ್ದವಾಗಿ ಪಡೆದಿದ್ದೇವೆ ಎಂದು ವಿಧಾನಸೌಧದಲ್ಲೇ ಆರ್ಭಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾನು ಪ್ರಕರಣ ದಾಖಲು ಮಾಡುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡು, 14 ನಿವೇಶನಗಳನ್ನು ವಾಪಾಸ್ಸು ಕೊಟ್ಟಿದ್ದಕ್ಕಿಂತ ದೊಡ್ಡ ತಪ್ಪನ್ನು ನಾನು ಮಾಡಿರುವುದಿಲ್ಲ, ನಡೆಯುವಾಗ ಕೆಲವು ಸಲ ಎಡವುದು ಸಹಜ ಎಂದಿದ್ದಾರೆ.
ಸೈಬರ್ ಠಾಣಾ ಅಧಿಕಾರಿಗಳು ನನ್ನನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಬೆಂಬಲಕ್ಕೆ ನಿಂತ ಮಾಧ್ಯಮದವರಿಗೆ, ರಾಜ್ಯದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು, ಸಮಾಜದ ಹಿತಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…