ಮೈಸೂರು

ಕಲಾವಿದರ ಮಾಸಾಶನಕ್ಕಾಗಿ ಅರ್ಜಿ ಆಹ್ವಾನ

ಮೈಸೂರು: ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಮಾಸಾಶನದ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿರಿಯ ಸಾಹಿತಿ/ಕಲಾವಿದರು ತಮ್ಮ ಸ್ವ-ವಿವರ/ ಕಲಾಪ್ರದರ್ಶನದ ದಾಖಲೆಗಳನ್ನು ಮತ್ತು ಛಾಯಾಚಿತ್ರಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವವರು ವಿವಿಧ ಕ್ಷೇತ್ರದಲ್ಲಿ 25 ವರ್ಷಗಳ ಗಣನೀಯ ಸೇವೆ ಸಲ್ಲಿಸಿರುವ ಬಗ್ಗೆ, ಕಲಾ ದಾಖಲೆಗಳು. ಸಾಹಿತಿ/ಕಲಾವಿದರು ಕನಿಷ್ಠ 58 ವರ್ಷ ವಯೋಮಾನದವರಾಗಿರಬೇಕು. ಅಂಗವಿಕಲರಾಗಿದ್ದಲ್ಲಿ ಕನಿಷ್ಠ 40 ವರ್ಷದ ವಯೋಮಾನದವರಾಗಿರಬೇಕು. ವಯಸ್ಸಿನ ಬಗ್ಗೆ ಶಿಕ್ಷಣ ಸಂಸ್ಥೆ ನೀಡಿದ ದಾಖಲಾತಿ ಪ್ರಮಾಣ ಪತ್ರ /ಶಾಲಾ ವರ್ಗಾವಣೆ ಪತ್ರ ಅಥವಾ ಅಂಕಪಟ್ಟಿ, ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು. ಒಂದು ವೇಳೆ ವಯಸ್ಸಿನ ಬಗ್ಗೆ ಮೇಲ್ಕಾಣಿಸಿದ ದಾಖಲೆಗಳು ಇಲ್ಲದಿದ್ದಲ್ಲಿ ನ್ಯಾಯಾಲಯದ ಡಿಕ್ರಿ ಆದೇಶದ ಮೂಲಕ ಪಡೆದ ಜನನ ಪ್ರಮಾಣ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದೂ.ಸಂ:0821-2513225 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

7 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

8 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

8 hours ago