ಮೈಸೂರು

ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಮೈಸೂರು : 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500 ರೂ. ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

ವಿದ್ಯಾರ್ಹತೆ : ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ.ಅಥವಾ
12 ನೇ ತರಗತಿ ಪಾಸ್ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 01,2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ ಆಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು https://khtigadag.ac.in/Lateralentryadmissionform.pdf ಲಿಂಕ್ ಮೂಲಕ ಆನ್ಲೈನ್ ನಲ್ಲಿ ಡೌನಲೊಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪಾಂಶುಪಾಲರ ಕಚೇರಿಗೆ ಮೇ.31 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ಬೆಟಗೇರಿಯ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪಾಂಶುಪಾಲರ ದೂ.ಸಂ.08372-297221, 944162822 ಅಥವಾ ಸಯ್ಯಾಜಿರಾವ್ ರಸ್ತೆಯಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ದೂ. ಸಂ. 0821-2441353 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ನ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

23 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

35 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

46 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago