ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಕನ್ನಡ, ಆಂಗ್ಲ ಮತ್ತು ಉರ್ದು ವಿಷಯಗಳಿಗೆ ಆಯಾ ವಿಷಯಗಳಲ್ಲಿ ಎಂ.ಎಸ್ಸಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 5 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲನಾ ಆಜಾದ್ ಭವನದ ಜಿಲ್ಲಾ ಅಧಿಕಾರಿಗಳ ಕಛೇರಿಯ ದೂ.ಸಂ: 0821-2422088 ಅಥವಾ 8951519595 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




