ಮೈಸೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಸ್ಕಿಲ್ ಟೆಕ್ನಿಷಿಯನ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ ಪಾಸ್, ಸೆಲ್ಫ್ ಎಂಪ್ಲಾಯಿಡ್ ಟ್ರೇಲರಿಂಗ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ , ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ತರಬೇತಿ ವಿದ್ಯಾರ್ಹತೆ : 8 ನೇ ತರಗತಿ ಹಾಗೂ ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ ತರಬೇತಿ ವಿದ್ಯಾರ್ಹತೆ :10 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿದ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಗೆ ಬೆಂಗಳೂರು ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತಿಯುಳ್ಳವರು ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ದೃಢೀಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮೇ 15 ರ ಸಂಜೆ 5 ಗಂಟೆಯೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. ಸಂ : 0821-2344661 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…