Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ.  ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರವನ್ನು ಏರ್ಪಡಿಸಿದ್ದು, ತರಬೇತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ಮುಕ್ಯ ವಿಶ್ವಾವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)‌ ಹಾಗೂ ನವದೆಹಲಿಯ ಯುಜಿಸಿ ನಡೆಸುವು ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕ(ಯುಜಿಸಿ-ನೆಟ್)‌ ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್)‌ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಆಗಸ್ಟ್‌ 9 ರೊಳಗಾಗಿ ಕರಾಮುವಿ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳೊಗಾಗಿ ನೋಂದಾಣಿ ಮಾಡಿಕೊಳ್ಳಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನು ಸಂಪರ್ಕಿಸಬಹುದಾಗಿದೆ.

Tags:
error: Content is protected !!