ಮೈಸೂರು: ಯುಜಿಸಿ ನೆಟ್ ಮತ್ತು ಕೆಸೆಟ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರವನ್ನು ಏರ್ಪಡಿಸಿದ್ದು, ತರಬೇತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ಮುಕ್ಯ ವಿಶ್ವಾವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ಹಾಗೂ ನವದೆಹಲಿಯ ಯುಜಿಸಿ ನಡೆಸುವು ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 9 ರೊಳಗಾಗಿ ಕರಾಮುವಿ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳೊಗಾಗಿ ನೋಂದಾಣಿ ಮಾಡಿಕೊಳ್ಳಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನು ಸಂಪರ್ಕಿಸಬಹುದಾಗಿದೆ.
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…