ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ ಕಡ್ಡಾಯವಾಗಿದ್ದು, 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ರಂಗಾಯಣದ ವೆಬ್‌ಸೈಟ್ www.rangayanamysore.karnataka.gov.in ನಿಂದ ಡೌನ್ ಲೋಡ್ ಮಾಡಿಕೊಂಡು ಆಗಸ್ಟ್ 28 ರೊಳಗೆ ವಿನೋಬಾ ರಸ್ತೆಯಲ್ಲಿರುವ ರಂಗಾಯಣದ ನಿರ್ದೇಶಕರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ರಂಗಾಯಣದ ಉಪನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…