Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಪತ್ರಕರ್ತರ ಉಚಿತ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು ೧೧ ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಆನ್ http://(https://sevasindhu.karnataka.gov.in)ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನು ಓದಿ : ಕ್ಷೀಣಿಸುತ್ತಿರುವ ಲಿಂಗಾನುಪಾತ : ಸುಪ್ರೀಂ ನ್ಯಾ.ಬಿ.ವಿ ನಾಗರತ್ನ ಕಳವಳ

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಽಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು‘ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

Tags:
error: Content is protected !!