Mysore
21
mist

Social Media

ಗುರುವಾರ, 11 ಡಿಸೆಂಬರ್ 2025
Light
Dark

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಮೈಸೂರು ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ: ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದoದು ಅಭ್ಯರ್ಥಿಗಳ ವಯೋಮಿತಿ 35 ವರ್ಷ ಒಳಗಿರಬೇಕು.

ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೇ ಫಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ಧನ್ವಂತರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರಮೇಶ್ ಅವರ ದೂ.ಸಂ: 9844393691 ಅನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!