Mysore
25
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಲೋಕಸಭಾ ಚುನಾವಣೆ: ಏ.13 ರಿಂದ 17 ರವರೆಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ

ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬoಧ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾoಶದಲ್ಲಿ ಮಾಹಿತಿಯನ್ನು ದಾಖಲಿಸಿ ಸದರಿ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಏ.13 ರಿಂದ 17 ರವರೆಗೆ ಮಾಡಲಾಗಿರುತ್ತದೆ.

ವಿಧಾನಸಭಾ ಕ್ಷೇತ್ರವಾರು ಹೋಂ ವೋಟಿಂಗ್ ನಡೆಯುವ ದಿನಾಂಕಗಳು: ಮಡಿಕೇರಿಯಲ್ಲಿ(208) ಏ.15 ರಿಂದ 17 ರವರೆಗೆ , ವಿರಾಜಪೇಟೆ(209) ಏ.15 ರಿಂದ 17ರವರೆಗೆ, ಪಿರಿಯಾಪಟ್ಟಣ(210) ಏ.14 ರಿಂದ 15ರವರೆಗೆ, ಹುಣಸೂರು(212) ಏ.15 ರಿಂದ 16ರವರೆಗೆ, ಚಾಮುಂಡೇಶ್ವರಿ(215) ಏ.13 ರಿಂದ 14ರವರೆಗೆ, ಕೃಷ್ಣರಾಜ(216) ಏ.13 ರಿಂದ 14ರವರೆಗೆ, ಚಾಮರಾಜ(217) ಏ.14 ರಿಂದ 15 ಹಾಗೂ ನರಸಿಂಹರಾಜ(218)ದಲ್ಲಿ ಏ.13 ರಿಂದ 14 ರವರೆಗೆ ಹೋಮ ವೋಟಿಂಗ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!