ಮೈಸೂರು

ಮಧ್ಯಸ್ಥಿಕೆದಾರರು ಪ್ರಕರಣ ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ನ್ಯಾ.ರವೀಂದ್ರ ಹೆಗಡೆ

ಮಧ್ಯಸ್ಥಿಕೆದಾರರ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ನ್ಯಾಯಾಧೀಶ ಸಲಹೆ

ಮೈಸೂರು: ಮಧ್ಯಸ್ಥಿಕೆದಾರರು ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗದೆ ಇರಬಹುದು, ಆದರೆ ಅವುಗಳನ್ನು ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಹೆಗಡೆ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಕರ್ನಾಟಕ ಮಧ್ಯಸ್ಥಿಕಾ ಕೇಂದ್ರ, ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ಶನಿವಾರ ನಡೆದ ಮೈಸೂರು, ಚಾಮರಾಜನಗರ ಮತ್ತು ಕೊಡಗು-ಮಡಿಕೇರಿ ಜಿಲ್ಲೆಯ ಮಧ್ಯಸ್ಥಿಕಗಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

ಮಧ್ಯಸ್ಥಿಕಗಾರರು ಬಹಳ ಹಿಂದಿನಿಂದ ನೇಮಕವಾಗಿದ್ದಾರೆ. ತುಂಬಾ ಪ್ರಕರಣದಲ್ಲಿ ಅಂಕಿ ಅಂಶ ಗಮನಿಸಿದಾಗ ಇನ್ನು ಸುಧಾರಣೆ ಅಗಬೇಕು. ಬೆಂಗಳೂರಿಗೆ ಸ್ಪರ್ಧೆ ನೀಡುವ ನಿಟ್ಟಿನಲ್ಲಿ ಉದ್ದೇಶ ಈಡೇರಬೇಕು. ಸಮಯ ಪಾಲನೆ ಮಾಡಬೇಕು. ನಿಮ್ಮ ಸಮಯ ಪಾಲನೆ ಹಾಗೂ ಪ್ರಕರಣದ ಫಲಿತಾಂಶಕ್ಕೆ ಜನರು‌ ಅಕರ್ಷಿತರಾಗಬೇಕು ಎಂದು ಸಲಹೆ‌ ನೀಡಿದರು.

ಪ್ರತಿ ಜಿಲ್ಲೆಗೆ ೨೦ ಮಂದಿ ಆಯ್ಕೆ ಮಾಡಲಾಗಿದೆ. ಈ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶೆ ಸಾವಿತ್ರಿ ಎಸ್.ಕುಜ್ಜಿ ಮಾತನಾಡಿ, ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ಹೆಚ್ಚಿದೆ. ಹೆಚ್ಚಿನ‌ ಪ್ರಮಾಣದಲ್ಲಿ ಮದ್ಯಸ್ಥಿಕೆದಾರರು ಪಾತ್ರವಹಿಸಬೇಕು. ಎಲ್ಲ ಪ್ರಕರಣ ಒಂದೆ ರೀತಿಯಲ್ಲಿರುವುದಿಲ್ಲ. ಇದನ್ನ ಗಮನಹರಿಸಿ ಪ್ರಕರಣ ಬಗೆಹರಿಸಲು ಮುಂದಾಗಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ವ್ಯಾಜ್ಯ ಪ್ರಕರಣ ಪರಿಹರಿಸುವಲ್ಲಿ ಮಧ್ಯಸ್ಥಿಕೆದಾರರ ಪಾತ್ರ ದೊಡ್ಡದು. ಬಹಳ ತಾಳ್ಮೆ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಮಧ್ಯಸ್ಥಿಕೆ ತರಬೇತುದಾರರಾದ ಎಸ್.ಆರ್‌.ಅನುರಾಧಾ, ಬೃಂದಾ ನಂದಕುಮಾರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

13 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

3 hours ago