ಮೈಸೂರು

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್ ಆಪ್ ಅನ್ನು ಬ್ಲಾಕ್ ಮಾಡುವುದರ ಬದಲು ಟ್ರಾಯ್ ಡಿಎನ್‌ಡಿ ಆಪ್ ಅಥವಾ ಸೇವಾ ಪೂರೈಕೆ ಆಪ್ ಅಥವಾ 1909ಕ್ಕೆ ಕರೆ ಮಾಡಿ ಎಂದು ಟ್ರಾಯ್ ಸಲಹೆ ನೀಡಿದೆ.

ಈ ಸಂಬಂಧ ಮೊಬೈಲ್ ಎಸ್‌ಎಂಎಸ್ ಮೆಸೇಜ್ ಮೂಲಕ ಟ್ರಾಯ್ ಜನರಿಗೆ ಮಾಹಿತಿ ನೀಡುತ್ತಿದೆ. ಮೈಸೂರಿನಲ್ಲಿ 2024ರಲ್ಲಿ 40 ಕೋಟಿ ರೂಪಾಯಿಯಷ್ಟು ಡಿಜಿಟಲ್ ವಂಚನೆಯಾಗಿದೆ. 2025ರಲ್ಲಿ 30 ಕೋಟಿ ರೂಪಾಯಿಗೂ ಮೀರಿ ಡಿಜಿಟಲ್ ವಂಚನೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಪಾಮ್ ಕರೆಗಳನ್ನು ಬ್ಲಾಕ್ ಮಾಡುವ ಬದಲು ಟ್ರಾಯ್ ಸೂಚಿಸಿದ ಆಪ್ ಹಾಗೂ ಸಂಖ್ಯೆಗೆ ಕರೆ ಮಾಡುವಂತೆ ಸಲಹೆ ನೀಡಿದೆ. ಡಿಜಿಟಲ್ ವಂಚನೆಗಳ ವಿರುದ್ಧ ಜನರಲ್ಲಿ ಟ್ರಾಯ್ ಪರಿಣಾಮಕಾರಿ ಜಾಗೃತಿ ಮೂಡಿಸುತ್ತಿದೆ. ಅಲ್ಲದೆ ಸೆನ್ ಪೊಲೀಸರು ಕೂಡ ಅರಿವು ಮೂಡಿಸುತ್ತಿದ್ದಾರೆ ಎಂದಿದೆ ಟ್ರಾಯ್.‌

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago