ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲೆ ಮಾಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ.
ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳು. ಈ ಮೂವರ ಗ್ಯಾಂಗ್ ಜೊತೆ ಓರ್ವ ಯುವತಿ ಭಾಗಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆರೋಪಿಗಳ ಗ್ಯಾಂಗ್ ಕೈ ಶಾಸಕ ಹರೀಶ್‌ಗೌಡ ಅವರ ವಿರುದ್ಧವೇ ನಕಲಿ ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಿ, ಕೋಟ್ಯಾಂತರ ಹಣಕ್ಕೆ ಬೇಡಿಕೆ ಇಟ್ಟಿದರು. ಈ ಬಗ್ಗೆ ಶಾಸಕರು ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಭೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿಚಾರಣೆ ವೇಳೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಈ ಗ್ಯಾಂಗ್ ವಿಐಪಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಅವರನ್ನೇ ಫಾಲೋ ಮಾಡಿ ಅವರ ಚಲನವಲನದ ಮೇಲೆ ಕಣ್ಣಿಟ್ಟು, ಬಳಿಕ ಅವರು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್ ರೂಮ್ ಬುಕ್ಕಿಂಗ್ ಹಾಗೂ ಚೆಕ್-ಇನ್, ಚೆಕ್-ಔಟ್ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಬಳಿಕ ಆರೋಪಿಗಳು ಅದೇ ರೂಮ್‌ಗಳನ್ನೇ ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಂಡು, ವಿಐಪಿಗಳ ಈ ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ನಕಲಿ ವಿಡಿಯೋ ಸೃಷ್ಟಿಸುತ್ತಿದ್ದರು. ಬಳಿಕ ಆ ವಿಡಿಯೋವನ್ನು ವಿಐಪಿಗಳಿಗೆ ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅಷ್ಟೆ ಅಲ್ಲದೇ ಹಣ ನೀಡದಿದ್ದರೇ ವಿಡಿಯೋ ವೈರಲ್ ಮಾಡಿ ಜೊತೆಗೆ ಪೊಲೀಸರಿಗೆ ಕೊಡುವುದಾಗಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಶಾಸಕ ಹರೀಶ್‌ಗೌಡ ಮಾತನಾಡಿ, ನನ್ನ ಪರಿಚಿತರು ಹಾಗೂ ಗೌರವಯುತವಾಗಿ ಬದುಕುತ್ತಿರುವವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಎರಡು ನಂಬರ್‌ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್ ಮೂಲಕ ಟ್ರೇಸ್ ಮಾಡಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಾನೇ ದೂರು ನೀಡಿದ್ದೆ. ಇಬ್ಬರ ಬಂಧನವಾಗಿದೆ. ತನಿಖೆ ನಡೆಯುತ್ತಿದ್ದು, ಕಾನೂನಾತ್ಮಕವಾಗಿ ಏನು ಆಗಬೇಕು ಆಗುತ್ತದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾತನಾಡಿ, ಕೆಲ ದಿನಗಳ ಹಿಂದೆ ಸಿಸಿಬಿ ಠಾಣೆಗೆ ಹನಿಟ್ರ್ಯಾಪ್ ಬಗ್ಗೆ ದೂರು ಬಂದಿತ್ತು. ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಅವರ ಹೇಳಿಕೆ ಪಡೆದುಕೊಳ್ಳುತ್ತಿದ್ದೇವೆ. ಈ ಗ್ಯಾಂಗ್‌ನಲ್ಲಿ ಮೂವರು ಇರುವುದು ಗೊತ್ತಾಗಿದೆ. ಇಬ್ಬರ ಬಂಧನವಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಉದ್ಯಮಿಗಳು ಹಾಗೂ ಉಪನ್ಯಾಸಕರಿಗೂ ಕರೆ ಮಾಡಿ ಗ್ಯಾಂಗ್ ಹಣಕ್ಕೆ ಬೇಡಿಕೆ ಇಟ್ಟಿದೆ. ಕಾನೂನು ಕ್ರಮ ಆಗಲಿದೆ ಎಂದರು.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…