ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಗೆ ರಾಮಲಲ್ಲಾನ ವಿಗ್ರಹ ಕೆತ್ತುವ ಮೂಲಕ ಖ್ಯಾತಿಯನ್ನು ಗಳಿಸಿದ್ದ ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಮತ್ತೊಂದು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.
ರಾಮಲಲ್ಲಾ ವಿಗ್ರಹ ಆಯ್ಕೆಯಾದ ಬಳಿಕ ಇದ್ದ ಸಮಯದಲ್ಲಿ ನಾನು ಈ ಪುಟ್ಟ ರಾಮಲಲ್ಲಾ ವಿಗ್ರಹವನ್ನು ಕೆತ್ತಿದೆ ಎಂದು ಅರುಣ್ ಯೋಗಿರಾಜ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡು ಫೋಟೊ ಹಂಚಿಕೊಂಡಿದ್ದಾರೆ.





