ಮೈಸೂರು

ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮ !

ಮೈಸೂರು:  ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ ಭಾರತೀಯ ಸೇನಾ ಮಾಜಿ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಸ್ಮರಣಾರ್ಥ ವನ್ಯಜೀವಿಗಳ ಜಲಪಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಮಾಜಿ ಸೈನಿಕರಿಂದ ಚಾಮುಂಡಿಬೆಟ್ಟದ ರಸ್ತೆಗಳಲ್ಲಿ ಜೀವಿಸುವ ಪ್ರಾಣಿ ಹಾಗೂ ಪಕ್ಷಿಗಳಿಗೆ  ನೀರಿನ ದಾಹವನ್ನು ನೀಗಿಸುವ ಸಲುವಾಗಿ ೨೦ ಸೀಮೆಂಟ್ ತೊಟ್ಟಿಗಳನ್ನು ರಸ್ತೆಗಳಲ್ಲಿ ಇರಿಸಲಾಗುವುದು ಎಂದರು.

ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಅಲ್ಲಿನ ಗ್ರಾಮ ಪಂಚಾಯಿತಿಯವರು ಸೋಮವಾರದಿಂದ ಶನಿವಾರದವರೆಗೆ ಈ ಕಾರ್ಯವನ್ನು ನಿರ್ವಹಿಸಲು ತಿಳಿಸಲಾಗಿದೆ ಎಂದರು.

ಮೈಸೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ನಂಜುಂಡಸ್ವಾಮಿ, ಉಪಾಧ್ಯಕ್ಷ ನೀಲಕಂಠ ಕುಮಾರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಜಿನಿ ಸುಬ್ಬಯ್ಯ, ನಿರ್ದೇಶಕರಾದ ಕೋಮಲ ರಾವ್ ಹಾಗೂ ಲಕ್ಷ್ಮಿಪಾಟೀಲ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

12 mins ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

24 mins ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

32 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

42 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

1 hour ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago