ಮೈಸೂರು

ಆಷಾಢ ಶುಕ್ರವರ : ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು.

ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾದರು. ಕೆಲವರು ಮೆಟ್ಟಿಲುಗಳ ಮೂಲಕ ಬಂದರೆ ಇನ್ನು ಕೆಲವರು ಸಾರಿಗೆ ಬಸ್‌ನಲ್ಲಿ ಬೆಟ್ಟಕ್ಕೆ ಆಗಮಿಸಿದರು. ಉಚಿತ ಪ್ರವೇಶ, 300 ರೂ, 2000 ರೂ. ಸರತಿ ಸಾಲಿನಲ್ಲಿ ನಿಂತು ಸಾವದಾನವಾಗಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಸರತಿ ಸಾಲಿನುದ್ದಕ್ಕೂ ಚಾಮುಂಡೇಶ್ವರಿಯ ಜಯಘೋಷಗಳು ಮೊಳಗಿದವು.

ಚಾಮುಂಡಿಬೆಟ್ಟಕ್ಕೆ ಉಚಿತ ಬಸ್‌ಗಳಲ್ಲಿ ಮಾತ್ರವಲ್ಲ, ಮೆಟ್ಟಿಲು ಮಾರ್ಗವಾಗಿ ಬರುವ ಭಕ್ತರ ಸಂಖ್ಯೆಯೂ ಅಧಿಕವಾಗಿತ್ತು. ಯುವತಿಯರು, ಗೃಹಿಣಿಯರು 1001 ಮೆಟ್ಟಿಲುಗಳಿಗೂ ಕುಂಕುಮ, ಅರಿಶಿಣ ಹಚ್ಚುತ್ತ ಮೆಟ್ಟಿಲು ಹತ್ತಿದರು. ಕೆಲವರು ಮಂಡಿಯಲ್ಲೇ ಮೆಟ್ಟಿಲುಗಳನ್ನು ಹತ್ತುವ ದೃಶ್ಯ ಭಕ್ತಿಭಾವದ ರೂಪಕದಂತಿತ್ತು.

ವಿಶೇಷ ಪೂಜೆ: ಮುಂಜಾನೆ ಮೂರು ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 5.30 ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಿಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ರಾತ್ರಿ 10 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ವಿಶೇಷ ಗಜಲಕ್ಷ್ಮಿ ಅಲಂಕಾರ: ಎಂದಿನಂತೆ ಮೂರನೇ ಆಷಾಢ ಶುಕ್ರವಾರವೂ ದೇವಾಲಯದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಚಾಮುಂಡೇಶ್ವರಿ ಬಿಳಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು. ದೇವಾಲಯದ ಇಡೀ ಆವರಣ ವಿಶೇಷ ಹೂವಿನ ಅಲಂಕಾರದಿಂದ ಆಕರ್ಷಕವಾಗಿತ್ತು. ಪ್ರವೇಶ ದ್ವಾರದಿಂದ ದೇವಸ್ಥಾನದ ಗರ್ಭಗುಡಿವರೆಗೆ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಆರ್ಕಿಡ್ ಹೂ, ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ನಾನಾ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಕಂಗೊಳಿಸುತ್ತಿತ್ತು. ಸಾರ್ವಜನಿಕರು ತಮ್ಮ ಮೊಬೈಲ್‌ಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಪ್ರಸಾದ ವಿತರಣೆ
ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಇಲಾಖೆಯ ಜಾಗದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಉಪ್ಪಿಟ್ಟು, ಕೇಸರಿಬಾತ್, ಬಾತ್, ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

1 hour ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

7 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

9 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

15 hours ago